ಬೆಂಗಳೂರು: ರಾಜ್ಯದ ಜನತೆಗೆ ನಂದಿನಿ ಹಾಲಿನ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ನಾಳೆ ಹಾಲು ಒಕ್ಕೂಟಗಳ ಸಭೆ ಕರೆದಿದೆ. ಸಭೆಯಲ್ಲಿ ಹಾಲಿನ ದರ ಹೆಚ್ಚಳ ಕುರಿತು ಚರ್ಚೆ ನಡೆಯಲಿದ್ದು, ರಾಜ್ಯದ ವಿವಿಧ ಹಾಲು ಒಕ್ಕೂಟಗಳು ಪ್ರತಿ ಲೀಟರ್ಗೆ ₹8 ಹೆಚ್ಚಳ ಮಾಡುವಂತೆ ಮನವಿ ಮಾಡಿವೆ.
ಹಾಲು ಉತ್ಪಾದನಾ ವೆಚ್ಚ, ರೈತರಿಗೆ ನೀಡಬೇಕಾದ ದರ ಸೇರಿದಂತೆ ಹಲವು ಕಾರಣಗಳನ್ನು ಮುಂದಿಟ್ಟುಕೊಂಡು ಒಕ್ಕೂಟಗಳು ದರ ಪರಿಷ್ಕರಣೆಗೆ ಒತ್ತಾಯಿಸಿವೆ. ಆದರೆ ಪ್ರತಿ ಲೀಟರ್ಗೆ ₹8ರಷ್ಟು ಏರಿಕೆ ಮಾಡುವ ಬದಲು ₹4ರಿಂದ ₹6ರಷ್ಟು ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
KMF ಸಭೆಯಲ್ಲಿ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದ್ದು, ನಿರ್ಧಾರವಾದರೆ ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ಇದೆ. ಈ ಮೂಲಕ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಹೊರೆ ಬೀಳುವ ಸಾಧ್ಯತೆ ಇದೆ.
ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್
ಬೆಂಗಳೂರು : ನಮ್ಮ ಮೆಟ್ರೋ ಪಿಂಕ್ ಲೈನ್ ಎಲಿವೇಟೆಡ್ ವಿಭಾಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಪ್ರಯಾಣಿಕರ ಸೇವೆಗೆ ಮುಕ್ತವಾಗುವ ಸಾಧ್ಯತೆ ಇದೆ. BMRCL ಈಗಾಗಲೇ ISI ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದಿದ್ದು, ಅಂತಿಮ ಸುರಕ್ಷತಾ ಪರಿಶೀಲನೆ ಬಳಿಕ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಿದೆ. ಆರಂಭದಲ್ಲಿ 6 ರೈಲುಗಳು 6ರಿಂದ 10 ನಿಮಿಷಗಳ ಅಂತರದಲ್ಲಿ ಸಂಚರಿಸುವ ನಿರೀಕ್ಷೆಯಿದೆ.
ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ನ ಎಲಿವೇಟೆಡ್ ವಿಭಾಗವು ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈಗಾಗಲೇ ಎಲಿವೇಟೆಡ್ ಮಾರ್ಗದ ಸುರಕ್ಷತಾ ಪರಿಶೀಲನೆಗಾಗಿ ಸ್ವತಂತ್ರ ಸಂಸ್ಥೆ ನಡೆಸಿದ ತಪಾಸಣೆಯ ಬಳಿಕ ISI ಪ್ರಮಾಣಪತ್ರ ಮತ್ತು ಫಿಟ್ನೆಸ್ ಪ್ರಮಾಣಪತ್ರಗಳನ್ನು ಪಡೆದುಕೊಂಡಿದೆ. ಇದೀಗ ರೈಲ್ವೆ ಮಂಡಳಿಯಿಂದ ಒಂದು ವಾರದೊಳಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ.
ಇದಾದ ಬಳಿಕ BMRCL ಅಗತ್ಯ ದಾಖಲೆಗಳನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಗೆ (CMRS) ಸಲ್ಲಿಸಿ, ಅಂತಿಮ ಹಂತದ ಸುರಕ್ಷತಾ ಪರಿಶೀಲನೆಗೆ ಆಹ್ವಾನಿಸಲಿದೆ. ಈ ಅಂತಿಮ ಪರಿಶೀಲನೆ ಎರಡು ದಿನಗಳ ಕಾಲ ನಡೆಯಲಿದೆ.
ಆರಂಭದಲ್ಲಿ 6 ಮೆಟ್ರೋ ರೈಲುಗಳು
ಪಿಂಕ್ ಲೈನ್ನ ಎಲಿವೇಟೆಡ್ ಮಾರ್ಗದಲ್ಲಿ ಆರಂಭಿಕ ಹಂತದಲ್ಲಿ ಒಟ್ಟು 6 ಮೆಟ್ರೋ ರೈಲುಗಳು ಸಂಚರಿಸಲಿವೆ. ಗರಿಷ್ಠ ಸಂಚಾರದ ಅವಧಿಯಲ್ಲಿ ಪ್ರತಿ 6 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುವ ನಿರೀಕ್ಷೆಯಿದೆ.
ಉಳಿದ ಸಮಯದಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸಲಿವೆ. ಈ ಮಾರ್ಗ ಆರಂಭವಾದ ಬಳಿಕ ಸಂಬಂಧಿತ ಪ್ರದೇಶಗಳ ಪ್ರಯಾಣಿಕರಿಗೆ ಸಂಚಾರ ಸುಗಮವಾಗುವ ನಿರೀಕ್ಷೆಯಿದೆ.

