HomeKarnatakaMilk Price Hike : ನಂದಿನಿ ಹಾಲಿನ ದರ ಏರಿಕೆ ; ರಾಜ್ಯ ಸರ್ಕಾರದ ವಿರುದ್ಧ...

Milk Price Hike : ನಂದಿನಿ ಹಾಲಿನ ದರ ಏರಿಕೆ ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

ಬೆಂಗಳೂರು : ನಂದಿನಿ ಹಾಲಿನ ದರ ಲೀಟರ್ ಗೆ 2.10 ರೂ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ.

ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular