HomeKarnatakaಜನಸಾಮಾನ್ಯರಿಗೆ ಮತ್ತೊಂದು ಶಾಕ್ : ರಾಜ್ಯದಲ್ಲಿ 'ನಂದಿನಿ' ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ |Nandini...

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ರಾಜ್ಯದಲ್ಲಿ ‘ನಂದಿನಿ’ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ |Nandini Milk Price hike

ಬೆಂಗಳೂರು : ಬೆಳಗಾವಿ ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದ್ದು, ಈ ಕುರಿತು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗುತ್ತಲೇ ಇದೆ. ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ KMF  ಗೆಮನವಿ ಮಾಡಿವೆ. ಈ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಭೀಮಾನಾಯ್ಕ್ ಹಾಲಿನ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಇದೀಗ ಬೆಳಗಾವಿ ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೆ ಹಾಲಿನ ದರ ಏರಿಕೆ ಆಗಲಿದ್ಯಾ ಎಂಬ ಅನುಮಾನ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular