ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡಿದವರು ನಾರಾಯಣ ಗುರುಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡುವ ಮೂಲಕ ಅವರಲ್ಲಿ ಸ್ವಾಭಿಮಾನದ ಜಾಗೃತಿಗೆ ಕಾರಣರಾದರು ನಾರಾಯಣ ಗುರುಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘’ಧಾರ್ಮಿಕ ಮತ್ತು ಸಾಮಾಜಿಕ ಸುಧಾರಣೆಗೆ ನಾರಾಯಣ ಗುರುಗಳದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ದೇವಾಲಯಗಳಿಗೆ ಹೋಗುವ ಹಕ್ಕು ತಮಗಿಲ್ಲವಾದರೆ ಆ ದೇವಾಲಯಗಳನ್ನೇ ನಿಮ್ಮಲ್ಲಿಗೆ ತರುತ್ತೇನೆ ಎಂದು ಘೋಷಿಸಿದ ಗುರುಗಳು, ಅಸ್ಪೃಶ್ಯರಿಗೆ ಪೂಜೆ ಮಾಡುವ ಹಕ್ಕನ್ನು ನೀಡುವ ಮೂಲಕ ಅವರಲ್ಲಿ ಸ್ವಾಭಿಮಾನದ ಜಾಗೃತಿಗೆ ಕಾರಣರಾದರು. ನಾರಾಯಣ ಗುರುಗಳು ತಮ್ಮ ಚಳುವಳಿಯ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವನ್ನಾಗಿ ಬಳಸಿದರು. ಆಧ್ಯಾತ್ಮ ಗುರುವಾಗಿ ಪಾರಮಾರ್ಥಿಕಕ್ಕಷ್ಟೇ ಅಂಟಿಕೊಳ್ಳದೆ ಲೌಕಿಕವೆನಿಸಿಕೊಂಡ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಪರಿವರ್ತನೆಯನ್ನು ಮಾಡಿ ತೋರಿಸಿದ ನಾರಾಯಣ ಗುರುಗಳಿಗೆ ನನ್ನ ಗೌರವ ಪೂರ್ವಕ ನಮನಗಳು’’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1825747201961689384

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read