HomeLatest NewsBIG NEWS: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕ ನರೇಂದ್ರಸ್ವಾಮಿ

BIG NEWS: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕ ನರೇಂದ್ರಸ್ವಾಮಿ

ಬೆಂಗಳೂರು: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಮಂತ್ರಿ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.

ಹಿರಿಯನಾಗಿ ನಾನೂಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಮಾಡಲು ಯಾರಿಗೂ ಅವಕಾಶವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular