HomeIndiaಬೀದಿ ನಾಯಿಗಳ ಹಾವಳಿಗೆ ರೋಸಿ ಹೋದ ಜನರು: ಅಧಿಕಾರಿಗಳ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟು...

ಬೀದಿ ನಾಯಿಗಳ ಹಾವಳಿಗೆ ರೋಸಿ ಹೋದ ಜನರು: ಅಧಿಕಾರಿಗಳ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟು ಪ್ರತಿಭಟನೆ ನಡೆಸಿದ ಯುವಸೇನಾ ಕಾರ್ಯಕರ್ತರು

ನಾಸಿಕ್: ಬೀದಿ ನಾಯಿಗಳ ದಾಳಿಗೆ ಮಕ್ಕಳು, ಹಿರಿಯರು ಹೈರಾಣಾಗುತ್ತಿದ್ದು,ಅದೆಷ್ಟೀ ಜನರು ಪ್ರಾಣ ಕಳೆದುಕೊಂಡಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಷ್ಟಾದರೂ ಸಂಬಂಧಪಟ್ಟ ಅಧಿಕಾರುಗಳು ಮಾತ್ರ ಬೀದಿನಾಯಿಗಳಿಗೆ ಕಡಿವಾಣ ಹಾಕುವ ಸಣ್ಣ ಪ್ರಯತ್ನಕ್ಕೂ ಮುಂದಾಗದೇ ಬೇಜವಾಬ್ದಾರಿ ಮುಂದುವರೆಸಿದ್ದಾರೆ. ಇಂತಹ ನಿರ್ಲಕ್ಷ ಮೆರೆದಿದ್ದ ಅಧಿಕಾರಿಗಳಿಗೆ ಇಲ್ಲೋರ್ವ ವ್ಯಕ್ತಿ ಸರಿಯಾಗಿ ಪಾಠ ಕಲಿಸಿದ್ದಾನೆ.

ಬೀದಿ ನಾಯಿಗಳ ಹಾವಳಿಯಿಂದ ರೋಸಿ ಹೋಗಿದ್ದ ವ್ಯಕ್ತಿಯೊಬ್ಬರು ಬೀದಿ ನಾಯಿಗಳನ್ನು ಹಿಡಿದು ನಗರ ಪಂಚಾಯತ್ ಕಚೇರಿಗೆ ಆಗಮಿಸಿದ್ದಲ್ಲದೇ, ಅಧಿಕಾರಿಗಳ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರದ ನಾಸಿಕ್ ನ ನಿಫಾಡ್ ನಲ್ಲಿ ಈ ಘಟನೆ ನಡೆದಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕದೇ ಬೇಜವಾಬ್ದಾರಿ ಮೆರೆಯುತ್ತಿದ್ದ ಅಧಿಕಾರಿಗಳ ವಿರುದ್ಧ ಯುವಸೇನಾ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿಯ ಕಚೇರಿಗೆ ಎರಡು ಬೀದಿ ನಾಯಿ ಮರಿಗಳನ್ನು ತಂದು ಅವರ ಟೇಬಲ್ ಮೇಲೆಯೇ ಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಶಿವಸೇನೆಯ ಯುವ ಘಟಕವಾದ ಯುವಸೇನಾದ ಜಿಲ್ಲಾ ಮುಖ್ಯಸ್ಥ ವಿಕ್ರಮ್ ರಾಂಧವೆ ನೇತೃತ್ವದಲ್ಲಿ ಕಾರ್ಯಕರ್ತರು ಈ ರೀತಿ ಪ್ರತಿಭಟನೆ ಅನ್ಡೆಸಿದ್ದು, ಪಂಚಾಯತ್ ಕಚೇರಿಯಲ್ಲಿ ಭಾಅರಿ ಹೈಡ್ರಾಮಾ ನಡೆಯಿತು.

ಬೀದಿ ನಾಯಿಗಳ ದಾಳಿಯಿಂದಾಗಿ ಜನ, ಜಾನುವಾರುಗಳು ಬೇಸತ್ತು ಹೋಗಿದ್ದಾರೆ. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಜೀವ ಕೈಯಲ್ಲಿ ಹಿಡಿದು ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಬೀದಿನಾಯಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಬೇಸತ್ತ ಯುವಸೇನ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ಚೀಲಗಳಲ್ಲಿ ತಂದಿದ್ದ ಎರಡು ನಾಯಿ ಮರಿಗಳನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಧೀರಜ್ ಭಾಮ್ರೆ ಅವರ ಮೇಜಿನ ಮೇಲೆ ಬಿಟ್ಟಿದ್ದಾರೆ. ಆ ಮರಿಗಳು ಟೇಬಲ್ ಮೇಲೆಲ್ಲಾ ಅತ್ತಿತ್ತ ಓಡಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಷ್ಟೇ ಅಲ್ಲದೇ ಅಧಿಕಾರಿಯ ಮೇಜಿನ ಮೇಲೆ ನೋಟುಗಳ ಹಾರವನ್ನಿಟ್ಟು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರು ನಿಫಾಡ್ ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಮಿತಿಮೀರಿದ್ದು, ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈಗಾಗಲೇ ಹಲವು ಜನರು ನಾಯಿ ಕಡಿತಕ್ಕೆ ಒಳಗಾಗಿದ್ದು, ಸಾರ್ವಜನಿಕರು ನಿರಂತರವಾಗಿ ದೂರು ನೀಡುತ್ತಿದ್ದರೂ ನಗರ ಪಂಚಾಯತ್ ಆಡಳಿತ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದಲ್ಲಿ ತಕ್ಷಣವೇ ನಾಯಿಗಳ ಸಂತಾನಹರಣ ಚಿಕಿತ್ಸೆ ಅಭಿಯಾನ ಆರಂಭಿಸಬೇಕು. ನಾಯಿಗಳನ್ನು ಹಿಡಿಯಲು ಸೂಕ್ತ ವ್ಯವಸ್ಥೆ ಮಾಡಬೇಕು ಹಾಗೂ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಯುವಸೇನಾ ಮುಖಂಡರು ಒತ್ತಾಯಿಸಿದ್ದಾರೆ.

ಆಡಳಿತ ಮಂಡಳಿ ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸಮ್ಮುಖದಲ್ಲೇ ಮತ್ತೊಮ್ಮೆ ಬೀದಿ ನಾಯಿಗಳನ್ನು ಮುಖ್ಯಾಧಿಕಾರಿಗಳ ಕಚೇರಿಯೊಳಗೆ ಬಿಟ್ಟು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular