ಭಗತ್ ಸಿಂಗ್ ಜನ್ಮ ದಿನಾಚರಣೆ ವೇಳೆ ಗಾಂಧಿ ಹಂತಕ ಗೋಡ್ಸೆ ಭಾವಚಿತ್ರ ಮೆರವಣಿಗೆ !

GODSE 1

ಭಗತ್ ಸಿಂಗ್ ಜನ್ಮದಿನ ಆಚರಣೆ ಸಮಾರಂಭದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರ ಮೆರವಣಿಗೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಗುರುವಾರದಂದು ಈ ಘಟನೆ ನಡೆದಿದ್ದು, ವೈಜೂ ಸಾವುಕಾರ ಮುರಗನೂರು ನೇತೃತ್ವದಲ್ಲಿ ಭಗತ್ ಸಿಂಗ್ ಜನ್ಮದಿನ ಆಚರಣೆ ಸಮಾರಂಭವನ್ನು ಗ್ರಾಮದ ಹನುಮಾನ್ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ರಾಣಿ ಚೆನ್ನಮ್ಮ, ಸರ್ದಾರ್ ವಲ್ಲಭಭಾಯಿ ಪಟೇಲ್ ಮೊದಲಾದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಜೊತೆ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪೊಲೀಸರು, ನಾಥುರಾಮ್ ಗೋಡ್ಸೆ ಭಾವಚಿತ್ರ ಮೆರವಣಿಗೆಗೆ ಯಾವುದೇ ಅನುಮತಿ ನೀಡಿರಲಿಲ್ಲ. ನಮಗೆ ಘಟನೆ ಸಂಬಂಧ ಈವರೆಗೆ ಯಾವುದೇ ದೂರು ಬಂದಿಲ್ಲ, ಒಂದೊಮ್ಮೆ ಯಾರಾದರೂ ದೂರು ದಾಖಲಿಸಿದರೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read