69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಅಲ್ಲು ಅರ್ಜುನ್ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ.
‘ಪುಷ್ಪಾ’ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, ಟಾಲಿವುಡ್ ಗೆ ಮೊದಲ ಬಾರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಬಂದಿದೆ.
ಇದುವರೆಗೆ ಟಾಲಿವುಡ್ ನಲ್ಲಿ ಅತ್ಯುತ್ತಮ ನಾಯಕ ನಟ ಪ್ರಶಸ್ತಿಯನ್ನು ಯಾರೂ ಪಡೆದುಕೊಂಡಿಲ್ಲ. ಮೊದಲ ಬಾರಿಗೆ ತೆಲುಗು ನಟರೊಬ್ಬರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಬಂದಿದೆ. ತೆಲುಗು ಚಿತ್ರಗಳು ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದವು. ಆದರೆ, ಇದುವರೆಗೆ ಅತ್ಯುತ್ತಮ ನಾಯಕ ಪ್ರಶಸ್ತಿ ಪಡೆದುಕೊಂಡಿರಲಿಲ್ಲ. ಮೊದಲ ಬಾರಿಗೆ ಅಲ್ಲು ಅರ್ಜುನ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಬಂದಿದೆ. ಇದು ಟಾಲಿವುಡ್ ನಲ್ಲಿ ಸಂಭ್ರಮ ಹೆಚ್ಚಿಸಿದೆ.