ಕಲ್ಲಂಗಡಿ ಹಣ್ಣುಗಳ ಮೇಲಿನ ಧೂಳನ್ನು ಸ್ವಚ್ಛಗೊಳಿಸಲು ವ್ಯಕ್ತಿಯೊಬ್ಬ ರಾಷ್ಟ್ರಧ್ವಜ ಬಳಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಝಾನ್ಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಚಿತ್ರೀಕರಿಸಿದ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ನಂತರ ವಿಷಯವು ಮುನ್ನೆಲೆಗೆ ಬಂದಿದೆ. ವ್ಯಕ್ತಿಯು ರಾಷ್ಟ್ರಧ್ವಜ ಬಳಸಿ ಕಲ್ಲಂಗಡಿಗಳ ಧೂಳನ್ನು ಸ್ವಚ್ಛಗೊಳಿಸುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು.
ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದ ಘಟನೆ ಬೆಳಕಿಗೆ ಬಂದಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ದೆಹಲಿಯಲ್ಲಿ 52 ವರ್ಷದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ದೆಹಲಿ ಪೊಲೀಸರು ಬಂಧಿಸಿದ್ದರು.
प्रकरण में थाना प्रभारी समथर को तत्काल जांचकर आवश्यक कार्यवाही हेतु निर्देशित किया गया है।
— Jhansi Police (@jhansipolice) April 7, 2023