HomeLatest NewsBREAKING: ಡೊನಾಲ್ಡ್ ಟ್ರಂಪ್ ವಲಸೆ ನೀತಿ ವಿರುದ್ಧ ಭುಗಿಲೆದ್ದ ಆಕ್ರೋಶ: ಅಮೆರಿಕದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

BREAKING: ಡೊನಾಲ್ಡ್ ಟ್ರಂಪ್ ವಲಸೆ ನೀತಿ ವಿರುದ್ಧ ಭುಗಿಲೆದ್ದ ಆಕ್ರೋಶ: ಅಮೆರಿಕದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಲಾಸ್ ಏಂಜಲೀಸ್: ಅಮೆರಿಕದಲ್ಲಿ ವಲಸಿಗರ ಪ್ರತಿಭಟನೆ ಮುಂದುವರೆದಿದೆ. ಲಾಸ್ ಏಂಜಲೀಸ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಲಾಸ್ ಎಂಜಲೀಸ್ ನಲ್ಲಿ ಎರಡು ಸಾವಿರ ವಿಶೇಷ ಪಡೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ವಲಸೆ ನೀತಿ ಕುರಿತಾಗಿ ಡೊನಾಲ್ಡ್ ಟ್ರಂಪ್ ಕೈಗೊಂಡ ನಿರ್ಧಾರಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಟ್ರಂಪ್ ಸರ್ಕಾರದ ವಲಸೆ ನೀತಿಯ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದೆ.

ಪ್ರತಿಭಟನೆ ನಿಲ್ಲಿಸುವಂತೆ ಡೊನಾಲ್ಡ್ ಟ್ರಂಪ್ ಮನವಿ ಮಾಡಿದ್ದು, ಪ್ರತಿಭಟನೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಸ್ ಏಂಜಲೀಸ್‌ನಲ್ಲಿ ವಲಸೆ ಜಾರಿ ಕಾರ್ಯಾಚರಣೆಗಳ ಕುರಿತು ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವೆ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಗಳನ್ನು ತಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಲಿಫೋರ್ನಿಯಾ ರಾಷ್ಟ್ರೀಯ ಗಾರ್ಡ್ ಪಡೆಗಳನ್ನು ನಿಯೋಜಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular