HomeKarnatakaಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು; NIA ಎಚ್ಚರಿಕೆ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು; NIA ಎಚ್ಚರಿಕೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳ ಮತ್ತೆ ಎಚ್ಚರಿಕೆ ನೀಡಿದೆ.

ಆಗಸ್ಟ್ 18 ರೊಳಗೆ ಶರಣಾಗುವಂತೆ ಎನ್ಐಎ ಎರಡನೇ ಎಚ್ಚರಿಕೆ ನೀಡಿದೆ. ಎನ್ಐಎ ಕೋರ್ಟ್ ಆದೇಶದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಜೂನ್ 30ರಂದು ಶರಣಾಗುವಂತೆ ಎಚ್ಚರಿಕೆ ನೀಡಲಾಗಿತ್ತು. ಆದರೂ ಆರೋಪಿಗಳು ಶರಣಾಗದೆ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 18 ರೊಳಗೆ ಶರಣಾಗುವಂತೆ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕೊಡಗು ಭಾಗದಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಧ್ವನಿ ವರ್ಧಕದ ಮೂಲಕ ಅನೌನ್ಸ್ ಮಾಡಲಾಗಿದೆ. ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ-ಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದ್ದು, ಆರೋಪಿಗಳ ಸುಳಿವು ನೀಡಿದಲ್ಲಿ ಬಹುಮಾನವನ್ನು ಕೂಡ ಘೋಷಿಸಲಾಗಿದೆ.

ಆರೋಪಿಗಳ ಮನೆಗಳಿಗೆ ಕೋರ್ಟ್ ನ ಆದೇಶ ಪ್ರತಿಯನ್ನು ಅಧಿಕಾರಿಗಳು ಅಂಟಿಸಿದ್ದಾರೆ. ಅಲ್ಲದೆ, ಆರೋಪಿಗಳ ಮನೆಗಳಿಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮುಸ್ತಫಾ, ಅಬೂಬಕರ್ ಸಿದ್ಧಿಕಿ, ಮಸೂದ್, ಅಗ್ನಾಡಿ ಸೇರಿದಂತೆ ಇನ್ನಿತರೆ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular