ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ರಾಜ್ಯದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿಯ ಗರಿ

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಸಿಕ್ಕಿದೆ.

ದೇಶಾದ್ಯಂತ 50 ಮಂದಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾರಾಯಣ ಪರಮೇಶ್ವರ್ ಭಾಗವತ್ ಮತ್ತು ಬಾಗಲಕೋಟೆಯ ಕೆಎಲ್ ಇ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಪ್ರಶಸ್ತಿ ಲಭಿಸಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ಪ್ರಮಾಣ ಪತ್ರ ಹಾಗೂ 50 ಸಾವಿರ ರೂ. ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿರಲಿದೆ.

ಇಲ್ಲಿದೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದವರ ಪಟ್ಟಿ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read