ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ವ್ಯಾಜ್ಯಗಳ ಇತ್ಯರ್ಥಕ್ಕೆ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್

ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದನ್ವಯ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.

ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು, ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಕೊಡಗು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂಸ್ವಾಧೀನ, ಬ್ಯಾಂಕ್ ವಸೂಲಾತಿ, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಂಎಂಆರ್‍ಡಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ, ಅವರ ಮನ ಒಲಿಸಿ, ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ 13 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪಾಲ್ಗೊಂಡು, ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read