ಹಾಸನ: ರಾಷ್ಟ್ರೀಯ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಸೆ.19 ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ಲೋಕ್ ಅದಾಲತ್ ನಡೆಯಲಿದೆ.
ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ಮತ್ತು ಮರಣ ನೋಂದಣಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಕೊಳ್ಳಬಹುದಾಗಿದೆ. ಇದರ ಸದುಪಯೋಗ ಪಡೆಯುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

