ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್:‌ ಡಿ.9 ರಂದು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ‌ʼಲೋಕ ಅದಾಲತ್ʼ

ಸೆ.9 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್' : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ! | Kannada Dunia | Kannada News | Karnataka News | India News

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‍ನ್ನು ಆಯೋಜಿಸಲಿವೆ.

ಈ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಬಹುದು.

ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read