Chandrayana-3 Success : ಆ.23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’, ಪ್ರತಿ ವರ್ಷ ಆಚರಣೆ : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ. ಹಾಗೂ ಪ್ರತಿ ವರ್ಷ ಆಚರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಇಡೀ ದೇಶವು ಚಂದ್ರಯಾನ -3 ರ ಯಶಸ್ಸನ್ನು ಆಚರಿಸುತ್ತಿದೆ, ಭಾರತೀಯ ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆಯನ್ನು ಕ್ಯಾಬಿನೆಟ್ ಶ್ಲಾಘಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೇಂದ್ರ ಕ್ಯಾಬಿನೆಟ್ ನಲ್ಲಿ ಹೇಳಿದರು.

ಭಾರತೀಯ ವಿಜ್ಞಾನಿಗಳ ಈ ಐತಿಹಾಸಿಕ ಸಾಧನೆಯನ್ನು ಕ್ಯಾಬಿನೆಟ್ ಶ್ಲಾಘಿಸುತ್ತದೆ, ಆಗಸ್ಟ್ 23 ನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನ ಕ್ಯಾಬಿನೆಟ್ ಸ್ವಾಗತಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಆಗಸ್ಟ್ ರಂದು ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಭಾರತವು ಈ ದಿನವನ್ನು ರಾಷ್ಟ್ರೀಯ ಬಾಹ್ಯಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು.
ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಕರೆಯೋಣ, ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ. ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದರು.

https://twitter.com/ANI/status/1696467708588802479?ref_src=twsrc%5Etfw%7Ctwcamp%5Etweetembed%7Ctwterm%5E1696467708588802479%7Ctwgr%5E20c2179f5ae2d8a66142766681c4b22c3b482e0f%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-chandrayaan-3-successfully-remembered-august-23-to-be-declared-as-national-space-day-celebrated-every-year%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read