ನವದೆಹಲಿ: ಕಾರ್ಮಿಕ ಸಂಘಟನೆಗಳಿಂದ ನಾಳೆ ಅಖಂಡ ಭಾರತ ಬಂದ್ ಗೆ ಕರೆ ನೀಡಲಾಗಿದೆ. 10ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿ, ಕಾರ್ಪೊರೇಟ್ ಪರವಾದ ನಿಲುವನ್ನು ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳಿನ ಬಂದ್ ಗೆ ಬೆಂಬಲ ನೀಡಿದ್ದಾರೆ. ಬ್ಯಾಂಕ್, ವಿಮೆ, ಅಂಚೆ ನೌಕರರು ಕೂಡ ಬಂದ್ ಗೆ ಬೆಂಬಲ ನೀಡಲಿದ್ದು, ಕರ್ನಾಟಕಕ್ಕೂ ನಾಳೆ ಬಂದ್ ಬಿಸಿ ತಟ್ಟಲಿದೆ ಎನ್ನಲಾಗಿದೆ.
ಸರ್ಕಾರಿ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಕಾರ್ಮಿಕ ಸಂಘಗಳು ಜುಲೈ 9 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದು, 25 ಕೋಟಿಗೂ ಹೆಚ್ಚು ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ತೊಡಗಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಬುಧವಾರ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸುವ ನಿರೀಕ್ಷೆಯಿದೆ. ಇದು ದೇಶಾದ್ಯಂತ ಸೇವೆಗಳಿಗೆ ಅಡಚಣೆಯುಂಟು ಮಾಡಲಿದೆ.