ನ. 8 ರಂದು ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಚಿತ್ರ ‘ನವಗ್ರಹ’ ಮರು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ನ. 8 ರಂದು ಮರು ಬಿಡುಗಡೆಯಾಗಲಿದೆ. 2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿತ್ತು ಇದೀಗ ನವೆಂಬರ್ 8ರಂದು ಮತ್ತೊಮ್ಮೆ ಮರು ಬಿಡುಗಡೆಯಾಗುತ್ತಿದೆ.

ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ದಿನಕರ್ ತೂಗುದೀಪ ನಿರ್ದೇಶದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಭರ್ಜರಿ ಯಶಸ್ಸು ಕಂಡಿದ್ದ ಈ ಚಿತ್ರ ಮತ್ತೊಮ್ಮೆ ತೆರೆ ಕಾಣುತ್ತಿರುವುದು ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ನನ್ನ ನಿರ್ದೇಶನದ 2ನೇ ಚಿತ್ರ ‘ನವಗ್ರಹ’, ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳ್ಳಿತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8 ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ ಎಂದು ದಿನಕರ್ ತೂಗುದೀಪ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read