ಗುರುಪ್ರಸಾದ್ ನಿರ್ದೇಶನದ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗ ನಾಯಕ’ ಚಿತ್ರ ಇದೇ ವರ್ಷ ಮಾರ್ಚ್ ಎಂಟು ಶಿವರಾತ್ರಿಯ ದಿನದಂದು ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು, ಈ ಸಿನಿಮಾ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಕ್ಕು ನಗಿಸುವಲ್ಲಿ ಯಶಸ್ವಿಯಾಗಿತ್ತು.
ಈ ಹಿಂದೆ ಗುರುಪ್ರಸಾದ್ ಹಾಗೂ ಜಗ್ಗೇಶ್ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಎದ್ದೇಳು ಮಂಜುನಾಥ’ ಹಾಗೂ ‘ಮಠ’ ಕೂಡ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿದ್ದವು. ಇದೀಗ ರಂಗ ನಾಯಕ ಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ಜನಪ್ರಿಯ ವಾಹಿನಿಯಾದ ಜೀ ಕನ್ನಡದಲ್ಲಿ ವೀಕ್ಷಿಸಬಹುದಾಗಿದೆ.
ಹಾಸ್ಯ ಪ್ರಧಾನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿಖ್ಯಾತ್ ತಮ್ಮ ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಜಗ್ಗೇಶ್ ಗೆ ಜೋಡಿಯಾಗಿ ರಚಿತಾ ಮಹಾಲಕ್ಷ್ಮಿ ಅಭಿನಯಿಸಿದ್ದಾರೆ. ಗುರುಪ್ರಸಾದ್, ಯೋಗರಾಜ್ ಭಟ್, ಹಾಗೂ ಚೈತ್ರ ಕೋಟೂರ್ ಉಳಿದ ತಾರಾಂಗಣದಲ್ಲಿದ್ದಾರೆ. ಅನುಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.