ಸಂಬಂಧ ಮುರಿದುಕೊಂಡ ಹುಡುಗಿ: ಜಾಲತಾಣದಲ್ಲಿ ಅಶ್ಲೀಲ ಫೋಟೋ ಹರಿಬಿಟ್ಟ ಯುವಕ

ನವಿ ಮುಂಬೈ: 17 ವರ್ಷದ ಬಾಲಕಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಮಾನಹಾನಿ ಹಾಗೂ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸೊಲ್ಲಾಪುರದ 22 ವರ್ಷದ ಯುವಕನ ಮೇಲೆ ಖಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಡುಗ ಮತ್ತು ಹುಡುಗಿ ಒಬ್ಬರಿಗೊಬ್ಬರು ತಿಳಿದಿದ್ದು, ಸಂಬಂಧದಲ್ಲಿದ್ದರು. ಹುಡುಗಿ ತಮ್ಮ ಸಂಬಂಧ ಮುರಿದುಕೊಂಡಿದ್ದರಿಂದ ಕೆರಳಿದ ಯುವಕ ಈ ರೀತಿ ಮಾಡಿದ್ದಾನೆ.

ಆರೋಪಿಯನ್ನು ಅನುರಾಗ್ ಮಹೇಶ್ ಮೋರೆ(22) ಎಂದು ಗುರುತಿಸಲಾಗಿದೆ, ಈ ಹಿಂದೆ ಖಂಡೇಶ್ವರ ನಿವಾಸಿಯಾಗಿದ್ದು, ಹುಡುಗಿ ಓದುತ್ತಿದ್ದ ಜೂನಿಯರ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಾಗಿದ್ದ.

ಹುಡುಗಿಯು ಇತರ ಹುಡುಗರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಕೆಯ ಮೇಲೆ ಮಹೇಶ್ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತ ಅವಳು ಇತ್ತೀಚೆಗೆ ಸೊಲ್ಲಾಪುರಕ್ಕೆ ಸ್ಥಳಾಂತರಗೊಂಡ ನಂತರ ಸಂಬಂಧವನ್ನು ಮುರಿದುಕೊಂಡಿದ್ದಳು ಎಂದು ಖಂಡೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನೊಂದಿಗಿನ ಸಂಬಂಧವನ್ನು ಮುರಿದುಕೊಂಡಿದ್ದರಿಂದ ಕೋಪಗೊಂಡ ಮಹೇಶ್ ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿದ್ದಾನೆ. ಅಶ್ಲೀಲ ಸಂದೇಶಗಳೊಂದಿಗೆ ಅವರ ಖಾಸಗಿ ಫೋಟೋಗಳನ್ನು ಅದರಲ್ಲಿ ಹಂಚಿಕೊಂಡಿದ್ದಾನೆ.

ಆರೋಪಿಯು ಅದೇ ಚಿತ್ರಗಳನ್ನು ದೂರುದಾರರ ತಂದೆ ಮತ್ತು ಚಿಕ್ಕಪ್ಪನಿಗೆ ವಿಭಿನ್ನ ವಾಟ್ಸಾಪ್ ಸಂಖ್ಯೆಗಳನ್ನು ಬಳಸಿ ಹಂಚಿಕೊಂಡಿದ್ದಾನೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಮತ್ತು ಮಾಹಿತಿ (ಐಟಿ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read