HomeKarnatakaಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : `ನವೋದಯ ವಿದ್ಯಾಲಯ’ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : `ನವೋದಯ ವಿದ್ಯಾಲಯ’ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :   : 2023-24ನೇ ಸಾಲಿನಲ್ಲಿ 8ನೇ ತರಗತಿ ಮತ್ತು 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ  ಖಾಲಿ ಇರುವ ಸ್ಥಾನಗಳಿಗೆ 2024-25ನೇ ಸಾಲಿನಲ್ಲಿ 9ನೇ ಹಾಗೂ 11ನೇ ತರಗತಿಗೆ ಪ್ರವೇಶಕ್ಕಾಗಿ ಆನ್‌ಲೈನ್ ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಮುಂದುವರೆದು ಕೆಲವೊಂದು ಪ್ರಮುಖ ಏರಿಯಾಗಳಲ್ಲಿ ವ್ಯತ್ಯಾಸವಿದ್ದರೆ ತಿದ್ದುಪಡಿ ಮಾಡಲು ನವಂಬರ್ 16 ಮತ್ತು  17 ರಂದು ತಿದ್ದುಪಡಿಗೆ ಅವಕಾಶ ನೀಡಲಾಗಿದೆ.  ಅರ್ಜಿಗಳನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ  www.navodaya.gov.in     ಮುಖಾಂತರ ಸಲ್ಲಿಸಬೇಕು. 2024 ರ ಫೆಬ್ರವರಿ 10 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು  ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular