
ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.

