ಗಮನಿಸಿ : ನವೋದಯ ವಿದ್ಯಾಲಯದಲ್ಲಿ 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 9 ಮತ್ತು 11 ತರಗತಿಗಳಿಗೆ (ಖಾಲಿ ಇರುವ ಸೀಟಿಗೆ ಅನ್ವಯಿಸಿ) ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು 2024 ರ ಫೆಬ್ರವರಿ, 10 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ.ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು. ಹೆಚ್ಚಿನ ವಿವರವನ್ನು https://navodaya.gov.in ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read