ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ ನೀಡಿ, ಜೂನ್ 25 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. 10ನೇ ತರಗತಿಯ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡಾವಾರು 60ರಷ್ಟು ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು ದಿನಾಂಕ 01.06.2009 ರಿಂದ 31.07.2011 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ವಿದ್ಯಾಲಯದ ಅಧಿಕೃತ ಇಮೇಲ್ ([email protected]) ಅಥವಾ ವೆಬ್ಸೈಟ್ (https://navodaya.gov.in/…/SHIMOGA/en/home/index.html) ಅನ್ನು ಗಮನಿಸಬಹುದಾಗಿದೆ.
ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ, ಕೃಷಿ ಯಾಂತ್ರೀಕರಣ ಉಪಯೋಜನೆ, VBGRAMG, RKVY, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ರೈತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಸಮಯದಲ್ಲಿ ಸಲ್ಲಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ – 08184-295112 /9663634388, ಸಾಗರ-08183-295124/ 9900903393, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು

