HomeKarnatakaBREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150ಕ್ಕೂ ಹೆಚ್ಚು ಶೆಡ್ ಗಳಿದ್ದು, ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular