HomeIndiaಅಪಘಾತದಲ್ಲಿ ಗಾಯಗೊಂಡಿದ್ದ NCP ನಾಯಕ ನವಾಬ್ ಮಲಿಕ್ ಅಳಿಯ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ NCP ನಾಯಕ ನವಾಬ್ ಮಲಿಕ್ ಅಳಿಯ ಸಾವು

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಇಂದು  ಮುಂಬೈನಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ್ದಾರೆ.

ಸೆಪ್ಟೆಂಬರ್ 18 ರಂದು ಸೆಂಟ್ರಲ್ ಮುಂಬೈನ ಕುರ್ಲಾದಲ್ಲಿ ಎಸ್‌ಯುವಿ ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ ಸಮೀರ್ ಖಾನ್ ಗಾಯಗೊಂಡಿದ್ದರು. ಕುರ್ಲಾ ಪಶ್ಚಿಮದ ಆಸ್ಪತ್ರೆಯೊಂದರ ಹೊರಗೆ ಈ ಘಟನೆ ನಡೆದಿತ್ತು.

ಖಾನ್ ತಮ್ಮ ಪತ್ನಿ ನಿಲೋಫರ್ ಅವರೊಂದಿಗೆ ನಿತ್ಯದ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ದಂಪತಿಗಳು ತಮ್ಮ ಎಸ್‌ಯುವಿಯಲ್ಲಿ ಕುಳಿತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ವಾಹನವು ಹತ್ತಿರದ ಕಟ್ಟಡದ ಗೋಡೆಗೆ ಡಿಕ್ಕಿ ಹೊಡೆದು ಖಾನ್ ಅವರ ತಲೆಗೆ ಗಾಯಗಳಾಗಿದ್ದವು. ಕೂಡಲೇ ಸ್ಥಳೀಯರ ನೆರವಿನಿಂದ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular