HomeLatest NewsBIG NEWS: ಛತ್ತೀಸ್ ಗಡದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ASP ದುರ್ಮರಣ

BIG NEWS: ಛತ್ತೀಸ್ ಗಡದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ASP ದುರ್ಮರಣ

ರಾಯ್ಪುರ: ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಎ ಎಸ್ ಪಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಎ ಎಸ್ ಪಿ ಆಕಾಶ್ ರಾವ್ ಗಿರಿಪುಂಜೆ ಮೃತಪಟ್ಟಿದ್ದಾರೆ. ಕೊಂಟಾ-ಎರಾಬೋರಾ ರಸ್ತೆಯ ದೋಂದ್ರಾ ಬಳಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಡಿಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಸುಳ್ಳುಸುದ್ದಿಯೊಂದನ್ನ ಹಬ್ಬಿಸಿದ್ದ ನಕ್ಸಲರು ಪೊಲೀಸರು ಸ್ಥಳಕ್ಕಾಗಮಿಸುವಂತೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಬರುತ್ತಿದಂತೆ ಐಇಡಿ ಸ್ಫೋಟಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular