BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಯಲಿದೆ. ಈ ಹಿಂದೆ ನಕ್ಸಲರು ಹಾಸನ ಜಿಲ್ಲೆಯ ಸಕಲೇಶಪುರ ಭಾಗದಲ್ಲಿ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ.

ಇಂದಿನ ಸಭೆ ಬಳಿಕ ನಕ್ಸಲರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ಈಗಾಗಲೇ ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ ಪೊಲೀಸರು ಕುಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ಅಲರ್ಟ್ ಆಗಿದ್ದು, ಕೂಂಬಿಂಗ್ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read