HomeKarnatakaBIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ...

BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಯಲಿದೆ. ಈ ಹಿಂದೆ ನಕ್ಸಲರು ಹಾಸನ ಜಿಲ್ಲೆಯ ಸಕಲೇಶಪುರ ಭಾಗದಲ್ಲಿ ಕಾಣಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನ ಸಭೆ ಬಳಿಕ ನಕ್ಸಲರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ಈಗಾಗಲೇ ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ ಪೊಲೀಸರು ಕುಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ಅಲರ್ಟ್ ಆಗಿದ್ದು, ಕೂಂಬಿಂಗ್ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular