ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೂ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಇನ್ ಸ್ಟಾ ಗ್ರಾಂ ನಲ್ಲಿ ಕಿಡಿಗೇಡಿಗಳು ಅಶ್ಲೀಲವಾಗಿ ಕಮೆಂಟ್ ಮಾಡಿದ್ದು, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ನಯನಾ ಮೋಟಮ್ಮ ಅವರ ಬಟ್ಟೆ ಬಗ್ಗೆ ಕೆಟ್ಟದಾಗಿ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ನಯನಾ ಮೋಟಮ್ಮ, ಇನ್ ಸ್ಟಾ ಗ್ರಾಂ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ಒಂದು ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹಾಗೂ ಇನ್ನೊಂದು ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಎರಡು ಖಾತೆ ಹೊಂದಿದ್ದಾರೆ. ವೈಯಕ್ತಿಕ ಇನ್ ಸ್ಟಾ ಗ್ರಾಂ ಖಾತೆಯಲ್ಲಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಕಮೆಂಟ್ ಬಂದಿದೆ ಎಂದು ಸ್ವತಃ ನಯನಾ ಮೋಟಮ್ಮ ತಿಳಿಸಿದ್ದಾರೆ.

