HomeLatest NewsBIG NEWS: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಮೆಸೇಜ್: ಆರೋಪಿ ಅರೆಸ್ಟ್

BIG NEWS: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಮೆಸೇಜ್: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ಬಟ್ಟೆ ವಿಚಾರವಾಗಿ ಇನ್ಸ್ ಟ್ರಾ ಗ್ರಾಂ ನಲ್ಲಿ ಅವಮಾನಕಾರಿ ಕಮೆಂಟ್ ಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ನಯನಾ ಮೋಟಮ್ಮ ಅವರ ಪಿಎ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಅಶ್ಲೀಲ ಕಮಂಟೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತನನ್ನು ರಾಮನಗರ ಮೂಲದ ಯಕ್ಷಿತ್ ರಾಜ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಮೂಡಿಗೆರೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular