ಸಾವಾಗಿಲ್ಲ ಮಾರ್ರೆ ! : ಪ್ರದೀಪ್ ಈಶ್ವರ್ ಟ್ರೋಲ್ ಗೆ ಶಾಸಕಿ ‘ನಯನಾ ಮೋಟಮ್ಮ’ ಹೇಳಿದ್ದೇನು?

ಬೆಂಗಳೂರು : ಸಾವಾಗಿಲ್ಲ ಮಾರ್ರೆ ! ಎಂಬ ಪ್ರದೀಪ್ ಈಶ್ವರ್ ಟ್ರೋಲ್ಗೆ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸಾವಾಗಿಲ್ಲ ಮಾರ್ರೆ ನಿಜ! ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ಏನಿದು ಟ್ರೋಲ್..?

ಕಳೆದ ಗುರುವಾರ ಸದನದಲ್ಲಿ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ವಾಗ್ಯುದ್ದ ನಡೆಯುತ್ತಿತ್ತು. ಈ ವೇಳೆ ಮಧ್ಯಪ್ರವೇಶಿಸಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಒಂದು ಸಾವಿಗೆ ಇಷ್ಟೊಂದು ಹೋರಾಟ ಮಾಡ್ತಿದ್ದಾರೆ, ಕೊರೊನಾ ವೇಳೆ ಸಾವಿರಾರು ಸಾವು ಆಯ್ತು. ಅವುಗಳಿಗೆ ನ್ಯಾಯ ಬೇಡ್ವಾ ಎಂದು ಪ್ರಶ್ನಿಸಿದ್ದರು.ಅದಕ್ಕೆ ಹೇ ಪ್ರದೀಪ್ ಈಶ್ವರ್ ಸ್ಪೀಕರ್ ಸಾವಾಗಿಲ್ಲ ಮಾರ್ರೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದರು. ಇದಕ್ಕೆ ಮೇಜು ತಟ್ಟಿ ಬೆಂಬಲ ಸೂಚಿಸಿದ್ದ ನಯನಾ ಮೋಟಮ್ಮ ಕೂಡ ಬೆಂಬಲ ಸೂಚಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗುರುವಾರ ಸದನದಲ್ಲಿ ನೀಡಿದ ಹೇಳಿಕೆಯಿಂದ ಭಾರೀ ಟ್ರೋಲ್ ಆಗುತ್ತಿದ್ದಾರೆ. ಸದನಲ್ಲಿ ಮೇಜು ತಟ್ಟಿ ಅವರನ್ನು ಬೆಂಬಲಿಸಿದ್ದ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಕೂಡ ಟ್ರೋಲ್ಗೆ ಒಳಗಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಯನಾ ಮೋಟಮ್ಮ ‘ಸಾವಾಗಿಲ್ಲ ಮಾರ್ರೆ ನಿಜ! ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರದೀಪ್ ಈಶ್ವರ್ ಅವರು ಹೇಳಿರೋ ವಿಚಾರದಲ್ಲಿ ಯಾವ ತಪ್ಪು ಇಲ್ಲ. ಮಾಹಿತಿ ಕೊರತೆಯಿದ್ದಿರಬಹುದು ಅಷ್ಟೆ. ಆದರೆ, ಅವರು ಹೇಳಿರುವ ವಿಚಾರ, ಎತ್ತಿರುವ ಪ್ರಶ್ನೆ ಎರಡೂ ಸರಿಯಾಗಿಯೇ ಇದೆ. ಹಾಗಾಗಿಯೇ ನಾನೂ ಸಹ ಅವರ ಮಾತನ್ನು ಬೆಂಬಲಿಸಿದ್ದೇನೆ ಎಂದಿದ್ದಾರೆ.

https://twitter.com/NayanaJhawar/status/1677607368488792064

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read