ಜಮ್ಮು: ಜಮ್ಮುವಿನಲ್ಲಿ ನಡೆದ ಗುಂಡಿನ ದಾಳಿಯಿಂದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಪವಾಡಸದೃಶವಾಗಿ ಪಾರಾಗಿದ್ದಾರೆ. ಆರೋಪಿ ಬಂಧಿಸಲಾಗಿದೆ.
ಬುಧವಾರ ರಾತ್ರಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹೊರಡುತ್ತಿದ್ದಾಗ ಹಿಂದಿನಿಂದ ಬಂದ ಬಂದೂಕುಧಾರಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಪವಾಡಸದೃಶವಾಗಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದಾಗ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಲಹೆಗಾರ ನಾಸಿರ್ ಅಸ್ಲಂ ವಾನಿ ಅಬ್ದುಲ್ಲಾ ಜೊತೆಗಿದ್ದರು.
ಆರೋಪಿಯನ್ನು ಅಜಿತ್ ಸಿಂಗ್ ಅವರ ಪುತ್ರ ಮತ್ತು ಜಮ್ಮುವಿನ ಪುರಾಣಿ ಮಂಡಿ ನಿವಾಸಿ 63 ವರ್ಷದ ಕಮಲ್ ಸಿಂಗ್ ಜಮ್ವಾಲ್ ಎಂದು ಗುರುತಿಸಲಾಗಿದ್ದು, ಕಳೆದ 20 ವರ್ಷಗಳಿಂದ ಅಬ್ದುಲ್ಲಾ ಅವರನ್ನು ಗುರಿಯಾಗಿಸಲು ಅವಕಾಶಕ್ಕಾಗಿ ಕಾಯುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

