ಬೆಂಗಳೂರು : ಬೆಂಗಳೂರಲ್ಲಿ ಎನ್ ಸಿಬಿ (NCB) ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಬರೋಬ್ಬರಿ 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬೆನ್ ಅಣಬೆ ಜಪ್ತಿ ಮಾಡಿಕೊಂಡಿದ್ದಾರೆ.
ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿತ್ತು. ಬಂಧಿತರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಜಪ್ತಿ ಮಾಡಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.