ಶಾಲಾ ಪಠ್ಯಪುಸ್ತಕಗಳಲ್ಲಿ ಆಮೂಲಾಗ್ರ ಬದಲಾವಣೆ: ರಾಮಾಯಣ, ಮಹಾಭಾರತ ಅಳವಡಿಕೆ

ನವದೆಹಲಿ: ಪಠ್ಯಪುಸ್ತಕಗಳಲ್ಲಿ ಆಮೂಲಾಗ್ರ ಬದಲಾವಣೆ ತರಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(NCERT) ರಚಿಸಿರುವ ಪಠ್ಯ ಪರಿಷ್ಕರಣಾ ಸಮಿತಿ ಚಿಂತನೆ ನಡೆಸಿದೆ.

ಮಹಾಭಾರತ, ರಾಮಾಯಣವನ್ನು ಶಾಲೆಗಳ ಇತಿಹಾಸ ಪಠ್ಯದಲ್ಲಿ ಅಳವಡಿಸುವಂತೆ ಶಿಫಾರಸು ಮಾಡಿದೆ. ತರಗತಿಯ ಗೋಡೆಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಸಂವಿಧಾನದ ಪ್ರಸ್ತಾವನೆ ಇರುವ ಫಲಕ ಹಾಕಬೇಕು ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಪಠ್ಯಗಳಲ್ಲಿ ಇಂಡಿಯಾ ಹೆಸರನ್ನು ಭಾರತ ಎಂದು ಬದಲಿಸಲು ಪಠ್ಯ ಪರಿಷ್ಕರಣಾ ಸಮಿತಿ ಶಿಫಾರಸು ಮಾಡಿತ್ತು. ಇದಾದ ನಂತರ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು ಮಾಡಿದ್ದು, ಎನ್.ಸಿ.ಇ.ಆರ್.ಟಿ. ಇನ್ನು ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read