HomeFeatured NewsAjit Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಕ್ರಾಂತಿ ಮಾಡಿ, ಡಿಸಿಎಂ ಆಗಿದ್ದ ಅಜಿತ್ ಪವಾರ್ ಪರಿಚಯ

Ajit Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಕ್ರಾಂತಿ ಮಾಡಿ, ಡಿಸಿಎಂ ಆಗಿದ್ದ ಅಜಿತ್ ಪವಾರ್ ಪರಿಚಯ

ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ,  ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಅಜಿತ್ ಪವಾರ್ ಬಾರಾಮತಿ ಬಳಿ ನಡೆದ ಖಾಸಗಿ ವಿಮಾನ ಅಪಘಾತದಲ್ಲಿ ಜನವರಿ 28, 2026ರ ಬುಧವಾರ ಸಾವನ್ನಪ್ಪಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾರಾಷ್ಟ್ರ ರಾಜ್ಯದ ಆಡಳಿತಾರೂಢ ‘ಮಹಾಯತಿ’ ಮೈತ್ರಿಕೂಟದ ಭಾಗವಾಗಿದೆ. 2024ರ ವಿಧಾನಸಭೆ ಚುನಾವಣೆಯಲ್ಲಿ 41 ಸೀಟುಗಳಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜಯಗಳಿಸಿದೆ.

‘ಮಹಾಯತಿ’ ಸರ್ಕಾರ ರಚನೆಗೆ ಬಿಜೆಪಿಗೆ ಪಕ್ಷ ಬೆಂಬಲ ನೀಡಿದೆ. ಆದ್ದರಿಂದ ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ. ಈ ಹಿಂದೆ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗಲೂ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿದ್ದರು. ಒಟ್ಟು 5 ಬಾರಿ ಡಿಸಿಎಂ ಆಗಿ ಅವರು ಕಾರ್ಯ ನಿರ್ವಹಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ದಾಖಲೆ ಬರೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಜಿತ್ ಪವಾರ್ ಪರಿಚಯ: ಮಹಾರಾಷ್ಟ್ರ ಮತ್ತು ರಾಷ್ಟ್ರ ರಾಜಕೀಯದಲ್ಲಿ ಅಜಿತ್ ಪವಾರ್ (66) ಪ್ರಮುಖವಾಗಿ ಕೇಳಿ ಬರುವ ಹೆಸರು. ಹಾಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ 1959 ರಲ್ಲಿ ಮಹಾರಾಷ್ಟ್ರದ ಬಾರಾಮತಿಯಲ್ಲಿ ಜನಿಸಿದರು.

ದೇವಲಾಲಿ ಪ್ರವರ ಪ್ರೌಢಶಾಲೆ ಮತ್ತು ಪುಣೆ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದರು. ಅವರು 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.

1991ರಲ್ಲಿ ಅವರು ಪುಣೆ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಆಯ್ಕೆಯಾದರು ಮತ್ತು ಸತತ 16 ವರ್ಷಗಳ ಕಾಲ ಆ ಹುದ್ದೆಯಲ್ಲಿದ್ದರು. ಅವರು 1991 ರಲ್ಲಿ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಆದರೆ, ಅಂದಿನ ಪಿ.ವಿ. ನರಸಿಂಹ ರಾವ್ ಸರ್ಕಾರದಲ್ಲಿ ಭಾರತದ ರಕ್ಷಣಾ ಸಚಿವರಾಗಿದ್ದ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗಾಗಿ ಆ ಸ್ಥಾನವನ್ನು ತೆರವು ಮಾಡಿಕೊಟ್ಟರು. ಶರದ್ ಪವಾರ್ ವಿರುದ್ಧ ಅಸಮಾಧಾನಗೊಂಡು ಅಜಿತ್ ಪವರ್ ಎನ್‌ಸಿಪಿ ಪಕ್ಷದಿಂದ ಹೊರಬಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದು, ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆ ಎಂದೇ ವಿಶ್ಲೇಷಿಸಲಾಗುತ್ತದೆ.

ಬಾರಾಮತಿ ಕ್ಷೇತ್ರದಿಂದ ಅಜಿತ್ ಪವಾರ್ ಶಾಸಕರಾಗಿ ಮಹಾರಾಷ್ಟ್ರ ವಿಧಾನಸಭೆ ಪ್ರವೇಶ ಮಾಡಿದರು. ನವೆಂಬರ್ 1992 ರಿಂದ ಫೆಬ್ರವರಿ 1993 ರವರೆಗೆ ಕೃಷಿ ಮತ್ತು ಇಂಧನ ಇಲಾಖೆಯ ರಾಜ್ಯ ಸಚಿವರಾಗಿದ್ದರು.

ನಂತರ 1995, 1999, 2004, 2009 ಮತ್ತು 2014ರಲ್ಲಿ ಅದೇ ಕ್ಷೇತ್ರದಿಂದ ಸತತವಾಗಿ ಮರು ಆಯ್ಕೆಯಾದರು. ಕೃಷಿ, ತೋಟಗಾರಿಕೆ ಮತ್ತು ಇಂಧನ, ಜಲಸಂಪನ್ಮೂಲ ಸಚಿವ ಮತ್ತು ಉಪಮುಖ್ಯಮಂತ್ರಿಯಾಗಿ ಮಹಾರಾಷ್ಟ್ರ ಸರ್ಕಾರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಜಿತ್ ಪವಾರ್ ಅವರು, ಮಹಾರಾಷ್ಟ್ರದ 23ನೇ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಣೆಮಾಡಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಿಡಿದೆದ್ದ ನಾಯಕ; ಅಜಿತ್ ಪವಾರ್ ಎನ್‌ಸಿಪಿ ಮುಖ್ಯಸ್ಥ, ಹಿರಿಯ ನಾಯಕ ಶರದ್ ಪವಾರ್ ಅವರ ಸೋದರಳಿಯ. ಡಿಸೆಂಬರ್ 5, 2024ರಂದು ಅವರು 2ನೇ ಬಾರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ್ದಾರೆ.

ಅಜಿತ್ ಪವಾರ್ ಈ ಹಿಂದೆ ಜುಲೈ 2, 2023ರಂದು ಮಹಾರಾಷ್ಟ್ರದ ಏಕನಾಥ್ ಶಿಂದೆ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಶರದ್ ಪವಾರ್ ವಿರುದ್ಧ ಸಿಡಿದೆದ್ದ ಅವರು ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ, 9 ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಅಂದಿನ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಭೇಟಿ ಮಾಡಿದ್ದರು.

ಅಜಿತ್ ಪವಾರ್ ಈ ನಡೆ ಮಹಾರಾಷ್ಟ್ರ ರಾಜಕೀಯ ಸಂಚಲನ ಮೂಡಿಸಿತ್ತು. ನವೆಂಬರ್ 2019 ರಲ್ಲಿ ಅಜಿತ್ ಪವಾರ್ ಅವರು ಎನ್‌ಸಿಪಿ ತೊರೆದು ಬಿಜೆಪಿ ಜೊತೆ ಕೈಜೋಡಿಸುವ ಮೂಲಕ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular