HomeIndiaBIG NEWS: ಎರಡು ರಾಜಕೀಯ ಸ್ಪೋಟದ ಸುಳಿವು ನೀಡಿದ ಸುಪ್ರಿಯಾ ಸುಳೆ

BIG NEWS: ಎರಡು ರಾಜಕೀಯ ಸ್ಪೋಟದ ಸುಳಿವು ನೀಡಿದ ಸುಪ್ರಿಯಾ ಸುಳೆ

ಪುಣೆ: ಇನ್ನು 15 ದಿನಗಳಲ್ಲಿ ದೇಶದಲ್ಲಿ ಎರಡು ರಾಜಕೀಯ ಸ್ಪೋಟ ಸಂಭವಿಸಲಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವರ್ ಪುತ್ರಿ, ಸಂಸದೆ ಸುಪ್ರಿಯಾ ಸುಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಬಣ ಬಿಜೆಪಿಯೊಂದಿಗೆ ಸರ್ಕಾರ ರಚಿಸಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಲ್ಲಿ ಸುಪ್ರಿಯ ಸುಳೆ ನೀಡಿರುವ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಮತ್ತು ದೆಹಲಿಯಲ್ಲಿ 15 ದಿನದಲ್ಲಿ ಎರಡು ರಾಜಕೀಯ ಸ್ಪೋಟ ಸಂಭವಿಸಲಿದೆ ಎಂದು ಸುಪ್ರಿಯಾ ಸುಳೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರದಲ್ಲಿ ಏನೇ ಹೊಸ ಬೆಳವಣಿಗೆಯಾದರೂ ನನ್ನ ಸಹೋದರನನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಏಕೆಂದರೆ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ನಾಣ್ಯದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ ಎಂದು ಮಾರ್ವಿಕ ಹೇಳಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular