ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ: NCP ಗೆ ಶಾಕ್ ನೀಡಿದ ಅಜಿತ್ ಪವಾರ್ ಬಣ; ಬಿಜೆಪಿ –ಶಿವಸೇನೆ ಸರ್ಕಾರಕ್ಕೆ ಬೆಂಬಲ

ಮುಂಬೈ: ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಎನ್.ಸಿ.ಪಿ.ಗೆ ಶಾಕ್ ನೀಡಿದ ಅಜಿತ್ ಪವಾರ್ ಬಿಜೆಪಿ –ಶಿವಸೇನೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಶಿಂದೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಅಜಿತ್ ಪವಾರ್ ಅವರಿಗೆ ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಮೂಲಕ ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ ಉಂಟಾಗಿದೆ.

ಶಿವಸೇನೆ –ಬಿಜೆಪಿ ಮೈತ್ರಿ ಸರ್ಕಾರಕ್ಕೆ ಎನ್‌ಸಿಪಿಯ ಅಜಿತ್ ಪವಾರ್ ಬಣದ 29 ಶಾಸಕರು ಬೆಂಬಲ ನೀಡಲು ನಿರ್ಧರಿಸಿದ್ದು, ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ರಾಜಭವನದಲ್ಲಿ ಸಿಎಂ ಏಕನಾಥ್ ಶಿಂದೆ ಮತತ್ಉ ಡಿಸಿಎಂ ದೇವೇಂದ್ರ ಫಡ್ನವೀಸ್ ಕೂಡ ಇದ್ದು, ಅಜಿತ್ ಪವಾರ್ ಡಿಸಿಎಂ ಆಗಿ ಮತ್ತು ಭುಜಬಲ್ ಸೇರಿ 8 ಜನ ಸಚಿವರಾಗಿ ಸಂಪುಟಕ್ಕೆ ಸೇರುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read