HomeKarnatakaಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ...?

ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಪೂರ್ವಸಿದ್ಧತೆ ಮಾಡಿಕೊಳ್ಳತೊಡಗಿದೆ. ಮೈತ್ರಿಕೂಟ ಬಲಪಡಿಸಲು ಮುಂದಾಗಿದೆ. ಬಿಜೆಪಿ -ಜೆಡಿಎಸ್ ನಡುವೆ ಮೈತ್ರಿ ಆಗಬಹುದೆಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದು, ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಂತರ ಎನ್.ಡಿ.ಎ. ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular