ಉಪರಾಷ್ಟ್ರಪತಿ ಹುದ್ದೆಗೆ ಇಂದು NDA ಅಭ್ಯರ್ಥಿ ಘೋಷಣೆ: ಕರ್ನಾಟಕ ರಾಜ್ಯಪಾಲ ಗೆಹ್ಲೊಟ್ ಆಯ್ಕೆ ಸಾಧ್ಯತೆ

ನವದೆಹಲಿ: ದೆಹಲಿಯಲ್ಲಿ ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಆಗಸ್ಟ್ 21ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ದಿಢೀರ್ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಸೇರಿ ಹಲವರು ರೇಸ್ ನಲ್ಲಿದ್ದಾರೆ. ಎನ್.ಡಿ.ಎ. ಮಿತ್ರಕೂಟ ಜಂಟಿ ಅಭ್ಯರ್ಥಿ ಆಯ್ಕೆಗೆ ನಿರ್ಧಾರ ಕೈಗೊಂಡಿದ್ದು, ಅಭ್ಯರ್ಥಿಯ ಆಯ್ಕೆಯ ಹೊಣೆಯನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಹಿಸಲಾಗಿದೆ.

ಇಂದು ಎನ್.ಡಿ.ಎ. ಸಭೆಯ ಬಳಿಕ ಒಮ್ಮತದ ಅಭ್ಯರ್ಥಿಯ ಆಯ್ಕೆ ಬಗ್ಗೆ ಘೋಷಣೆ ಮಾಡಲಾಗುವುದು. ರೇಸ್ ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ವಿ.ಕೆ. ಸಕ್ಸೇನಾ, ಹಂರಿವಂಶ್, ಆರಿಫ್ ಮೊಹಮ್ಮದ್ ಖಾನ್, ಆಚಾರ್ಯ ದೇವವ್ರತ ಸೇರಿ ಹಲವರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read