HomeIndiaಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಮೋದಿ ಸರ್ಕಾರ: ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ NDA ಮತ್ತೆ...

ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಮೋದಿ ಸರ್ಕಾರ: ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ NDA ಮತ್ತೆ ಅಧಿಕಾರಕ್ಕೆ

ನವದೆಹಲಿ: ಸುಧೀರ್ಘ 7 ಹಂತದ ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು, ವಾಹಿನಿಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಎನ್.ಡಿ.ಎ. ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿದ್ದಾರೆ ಎನ್ನಲಾಗಿದೆ.

ಪಿಎಂಎಆರ್‌ಕ್ಯೂ ಸಮೀಕ್ಷೆ ಪ್ರಕಾರ ಬಿಜೆಪಿ -ಎನ್.ಡಿ.ಎ. 359, ಇಂಡಿಯಾ ಮೈತ್ರಿಕೂಟ 154. ಇತರರು 30 ಸ್ಥಾನ ಗಳಿಸುವ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಎನ್.ಡಿ.ಎ. 353- 368, ಇಂಡಿಯಾ ಮೈತ್ರಿಕೂಟ 118 -133, ಇತರರು 43 -48 ಕ್ಷೇತ್ರಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನ್ ಕಿ ಬಾತ್ ಮತದಾನೋತ್ತರ ಸಮೀಕ್ಷೆ ಎನ್.ಡಿ.ಎ. 377, ಇಂಡಿಯಾ ಮೈತ್ರಿಕೂಟ 151, ಇತರರು 15 ಸ್ಥಾನ ಗಳಿಸುವ ಸಾಧ್ಯತೆ ಇದೆ.

ಇಂಡಿಯಾ ನ್ಯೂಸ್ ಮತದಾನೋತ್ತರ ಸಮೀಕ್ಷೆ ಪ್ರಕಾರ ಎನ್.ಡಿ.ಎ. 371, ಇಂಡಿಯಾ ಮೈತ್ರಿಕೂಟ 125, ಇತರರು 47 ಸ್ಥಾನ ಗಳಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular