HomeIndiaಇಂದಿನಿಂದ ಸಂಸತ್ ಅಧಿವೇಶನ ಆರಂಭ: ನಾಳೆ ಕೇಂದ್ರ ಬಜೆಟ್: ನೀಟ್, ನೆಟ್ ಅಕ್ರಮ ಬಗ್ಗೆ ಆಡಳಿತ-...

ಇಂದಿನಿಂದ ಸಂಸತ್ ಅಧಿವೇಶನ ಆರಂಭ: ನಾಳೆ ಕೇಂದ್ರ ಬಜೆಟ್: ನೀಟ್, ನೆಟ್ ಅಕ್ರಮ ಬಗ್ಗೆ ಆಡಳಿತ- ವಿಪಕ್ಷಗಳ ಜಟಾಪಟಿ ಸಾಧ್ಯತೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಜುಲೈ 22 ರಿಂದ ಆಗಸ್ಟ್ 12ರ ವರೆಗೆ 19 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಆಡಳಿತಾರೂಢ ಎನ್.ಡಿ.ಎ. ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ನೀಟ್, ನೆಟ್, ಆಗ್ನಿವೀರರು, ಐಎಎಸ್ ನೇಮಕಾತಿ ಗೊಂದಲ, ಮಣಿಪುರ ಹಿಂಸಾಚಾರ, ಬೆಲೆ ಏರಿಕೆ ಸೇರಿ ಹಲವು ಬಗ್ಗೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ.

ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ಈ ಅಧಿವೇಶನದಲ್ಲಿ ಆರು ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular