ವಿದೇಶದಲ್ಲಿ ಉನ್ನತ ವ್ಯಾಸಂಗದಲ್ಲಿರುವ ವಿದ್ಯಾರ್ಥಿಯ ವಿರುದ್ಧದ ಎನ್.ಡಿ.ಪಿ.ಎಸ್. ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಪರಿತೋಷ್ ಚಂದ್ರಶೇಖರ ಕುಲಕರ್ಣಿ ವಿರುದ್ಧ ಮಾದಕ ವಸ್ತುಗಳ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ಪರಿತೋಷ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ. ಪರಿತೋಷ್ ಅಮೆರಿಕದ ಕೊಲಂಬಿಯಾ ವಿವಿಯಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಪೊಲೀಸರು ಗಾಂಜಾ ವಶಪಡಿಸಿಕೊಂಡ ಸ್ಥಳದಿಂದ ಅರ್ಜಿದಾರರು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಈ ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಇತರೆ ಆರೋಪಿಗಳ ಹೇಳಿಕೆ ಆಧರಿಸಿ ಅರ್ಜಿದಾರರ ಹೆಸರನ್ನು ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಇದಕ್ಕೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ಅರ್ಜಿದಾರರು ವಿದೇಶದಲ್ಲಿದ್ದು ಹಲವಾರು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಆದರೂ ಅದಕ್ಕೆ ಸ್ಪಂದಿಸಿ ಸಹಕರಿಸುತ್ತಿಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ವಾದ, ಪ್ರತಿವಾದ ಆಲಿಸಿದ ನಂತರ ಅರ್ಜಿದಾರರು ವಿದೇಶದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ಸಹ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅರ್ಜಿದಾರರು ತೊಂದರೆ ಎದುರಿಸುವಂತಾಗಬಾರದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಎನ್.ಡಿ.ಪಿ.ಎಸ್. ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read