HomeLatest Newsಹೈದ್ರಾಬಾದ್ ಡ್ರಗ್ಸ್ ಜಾಲ: ಬೆಂಗಳೂರಿನಲ್ಲೂ ಇಡಿ ಅಧಿಕಾರಿಗಳ ದಿಢೀರ್ ದಾಳಿ, ಕೋಟ್ಯಂತರ ರೂ. ಅಕ್ರಮ ಹಣ...

ಹೈದ್ರಾಬಾದ್ ಡ್ರಗ್ಸ್ ಜಾಲ: ಬೆಂಗಳೂರಿನಲ್ಲೂ ಇಡಿ ಅಧಿಕಾರಿಗಳ ದಿಢೀರ್ ದಾಳಿ, ಕೋಟ್ಯಂತರ ರೂ. ಅಕ್ರಮ ಹಣ ವರ್ಗಾವಣೆ ಶಂಕೆ

ಬೆಂಗಳೂರು- ದೇಶಾದ್ಯಂತ ಸಂಚಲನ ಮೂಡಿಸಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತು (ಡ್ರಗ್ಸ್) ಸಾಗಾಟ ಹಾಗೂ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಂಗಳೂರಿನಲ್ಲಿ ಎರಡು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹೈದ್ರಾಬಾದ್ ಎನ್‌ಡಿಪಿಎಸ್ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎರಡು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಥೈಲ್ಯಾಂಡ್‌ನಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ

ಇತ್ತೀಚೆಗೆ ಹೈದರಾಬಾದ್ ಪೊಲೀಸರು ಭೇದಿಸಿದ ಬೃಹತ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಈ ಇಡಿ ದಾಳಿ ಮಹತ್ವ ಪಡೆದುಕೊಂಡಿದೆ.

ಥೈಲ್ಯಾಂಡ್‌ನಿಂದ ಹೈದರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವ್ಯಾಕ್ಯೂಮ್-ಸೀಲ್ಡ್ ಪ್ಯಾಕೇಜ್‌ಗಳಲ್ಲಿ ಭಾರತಕ್ಕೆ ಅಕ್ರಮವಾಗಿ ಬರೋಬ್ಬರಿ 1,500 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (Hydroponic Ganja) ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು.

ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾರಿ ನಿರ್ದೇಶನಾಲಯವು (ED) ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ (PMLA) ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದೆ.

ಹೈದ್ರಾಬಾದ್ ಸಂಪರ್ಕ

ಬೆಂಗಳೂರಿಗೂ ವಿಸ್ತರಿಸಿದ ಹಣಕಾಸು ಜಾಲ

ಈಗಾಗಲೇ ಹೈದ್ರಾಬಾದ್ ಪೊಲೀಸರು ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದೇ ತನಿಖೆಯ ಮುಂದುವರಿದ ಭಾಗವಾಗಿ ಹೈದ್ರಾಬಾದ್‌ನಲ್ಲಿ ಒಟ್ಟು 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಹೈದ್ರಾಬಾದ್‌ನಲ್ಲಿ ಪತ್ತೆಯಾದ ಡ್ರಗ್ಸ್ ಜಾಲದ ಹಣಕಾಸು ವ್ಯವಹಾರಗಳು ಬೆಂಗಳೂರಿಗೂ ವಿಸ್ತರಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಮಾದಕವಸ್ತು ಮಾರಾಟದ ಮೂಲಕ ಗಳಿಸಿದ ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು (Hawala / Money Laundering) ಬೇರೆಡೆಗೆ ವರ್ಗಾವಣೆ ಮಾಡಿರುವ ಮತ್ತು ಹೂಡಿಕೆ ಮಾಡಿರುವ ಶಂಕೆಯ ಮೇರೆಗೆ ಬೆಂಗಳೂರಿನ 2 ಕಡೆಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮಾದಕ ವಸ್ತುಗಳ ಕಳ್ಳಸಾಗಣೆಯಿಂದ ಬಂದ ಕಪ್ಪು ಹಣವನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಮತ್ತು ಇದರ ಹಿಂದೆ ಯಾರ್ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ವಲು ಇಡಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

ದಾಳಿ ವೇಳೆ ಸಿಕ್ಕಿರುವ ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಪ್ರಭಾವಿ ವ್ಯಕ್ತಿಗಳು ಹಾಗೂ ಜಾಲದ ಪ್ರಮುಖರು ವಿಚಾರಣೆಗೆ ಒಳಪಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular