HomeIndiaಕರ್ನಾಟಕ, ಕೇಂದ್ರ ಸರ್ಕಾರದ ಬರ ಪರಿಹಾರ ಸಮಸ್ಯೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್: ನೀವೇ ಬಗೆಹರಿಸಿಕೊಳ್ಳಿ...

ಕರ್ನಾಟಕ, ಕೇಂದ್ರ ಸರ್ಕಾರದ ಬರ ಪರಿಹಾರ ಸಮಸ್ಯೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್: ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ

ನವದೆಹಲಿ: ಬರ ಪರಿಹಾರ ಕುರಿತ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.

ಬರ ನಿರ್ವಹಣೆಗಾಗಿ ಎನ್.ಡಿ.ಆರ್.ಎಫ್. ಹಣಕಾಸು ನೆರವು ನೀಡುವ ಸಂಬಂಧ ಇರುವ ಸಮಸ್ಯೆಯನ್ನು ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳೇ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.

ಬರ ನಿರ್ವಹಣೆಗೆ ಎನ್.ಡಿ.ಆರ್.ಎಫ್.ನಿಂದ ನಿಧಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಮಂಗಳವಾರ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ವಿಚಾರದಲ್ಲಿ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಸಿದ ನ್ಯಾಯಪೀಠ ರಾಜ್ಯವನ್ನು ನೀವೇ ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದು, ವಿಚಾರಣೆ ವೇಳೆ ಈ ಸಂಬಂಧ ಇದುವರೆಗಿನ ಬೆಳವಣಿಗೆಗಳನ್ನು ಪಡೆದುಕೊಂಡಿದೆ. ಜನವರಿಗೆ ವಿಚಾರಣೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular