ಶಿಕ್ಷಕರು, ಅಕೌಂಟೆಂಟ್, ಇನ್ಸ್ ಪೆಕ್ಟರ್ ಸೇರಿ ಸರ್ಕಾರಿ ಇಲಾಖೆಗಳಲ್ಲಿ 71,000 ನೇಮಕಾತಿ ಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಜನರಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ಮೋದಿ ಶುಕ್ರವಾರ ನೀಡಲಿದ್ದಾರೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ ಸರ್ಕಾರದ ಅಡಿಯಲ್ಲಿ ಜೂನಿಯರ್ ಇಂಜಿನಿಯರ್‌ಗಳು, ಲೋಕೋ ಪೈಲಟ್‌ಗಳು, ತಂತ್ರಜ್ಞರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್ಸ್‌ಟೇಬಲ್, ಸ್ಟೆನೋಗ್ರಾಫರ್‌ಗಳು, ಜೂನಿಯರ್ ಅಕೌಂಟೆಂಟ್, ಗ್ರಾಮೀಣ ದಾಕ್ ಸೇವಕ್, ಆದಾಯ ತೆರಿಗೆ ಇನ್ಸ್‌ಪೆಕ್ಟರ್, ಶಿಕ್ಷಕ, ನರ್ಸ್, ವೈದ್ಯರು, ಸಾಮಾಜಿಕ ಭದ್ರತಾ ಅಧಿಕಾರಿ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ ಗಾರ್ ಮೇಳವು ಒಂದು ಹೆಜ್ಜೆಯಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read