HomeKarnatakaರಾಜ್ಯದ ನಿವಾಸಿಯಾಗಿರುವುದನ್ನು ದೃಢೀಕರಿಸುವ ದಾಖಲೆ ‘ಶಾಶ್ವತ ನಿವಾಸಿ ಪ್ರಮಾಣ ಪತ್ರ’ ಪಡೆಯಲು ಅಗತ್ಯ ಅರ್ಹತೆಗಳು

ರಾಜ್ಯದ ನಿವಾಸಿಯಾಗಿರುವುದನ್ನು ದೃಢೀಕರಿಸುವ ದಾಖಲೆ ‘ಶಾಶ್ವತ ನಿವಾಸಿ ಪ್ರಮಾಣ ಪತ್ರ’ ಪಡೆಯಲು ಅಗತ್ಯ ಅರ್ಹತೆಗಳು

ಪ್ರಸ್ತುತ ಕಂದಾಯ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿರುವ ಸರ್ಕಾರಿ ಆದೇಶಗಳು ಹಾಗೂ ಸುತ್ತೋಲೆಗಳ ಅನುಸಾರ ಕಂದಾಯ ಆಡಳಿತದ ಮೂಲಕ ಅರ್ಹ ವ್ಯಕ್ತಿಗಳಿಗೆ ವಾಸಸ್ಥಳ ಪ್ರಮಾಣ ಪತ್ರ(Residential Certificate) ಹಾಗೂ ಡೊಮಿಸೈಲ್ ಪ್ರಮಾಣ ಪತ್ರ(Domicile Certificate) ಗಳನ್ನು ನೀಡಲಾಗುತ್ತಿದೆ.

ಕಂದಾಯ ಇಲಾಖೆಯಿಂದ ನೀಡಲಾಗುತ್ತಿರುವ ಡೊಮಿಸೈಲ್ ಪ್ರಮಾಣ ಪತ್ರವು ಅದನ್ನು ಹೊಂದಿರುವ ವ್ಯಕ್ತಿಯು ಕರ್ನಾಟಕ ರಾಜ್ಯದ ಶಾಶ್ವತ ನಿವಾಸಿಯಾಗಿರುವುದನ್ನು ದೃಢೀಕರಿಸುವ ದಾಖಲೆಯಾಗಿದ್ದು, ಪ್ರವೇಶಾತಿ, ವಿದ್ಯಾರ್ಥಿವೇತನ, ಉದ್ಯೋಗ, ಕಲ್ಯಾಣ ಯೋಜನೆಗಳು ಹಾಗೂ ಇತರೆ ಕಾನೂನುಬದ್ಧ ಆಡಳಿತಾತ್ಮಕ ಉದ್ದೇಶಗಳಿಗಾಗಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಕೆಲವು ಅರ್ಹತೆಗಳನ್ನು ಹೊಂದಿರಬೇಕು.

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಹತೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಇವುಗಳಲ್ಲಿನ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಲಾಗುತ್ತದೆ.

ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು. ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ, ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು(10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು. ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ, 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು(10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.

ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ, ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.

ವಸತಿ ಆಸ್ತಿ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಅಥವಾ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.

ಸರ್ಕಾರಿ ದಾಖಲೆಗಳು: ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.

ಸರ್ಕಾರಿ, ಸಾರ್ವಜನಿಕ ಸೇವೆ: ಅರ್ಜಿದಾರರು ಅಥವಾ ಅವರ ತಂದೆ, ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು. ವಿವಾಹ:- ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು. ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ್ಯ ಹೊಂದಿರಬೇಕು.

ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಿಸಿದ ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ಕರ್ನಾಟಕ ಒನ್, ಗ್ರಾಮ ಒನ್, ಸಿಎಸ್‍ಸಿ ಗಳಲ್ಲಿ ಅರ್ಜಿ ಸಲ್ಲಿಸಿ, ಸಾರ್ವಜನಿಕರು ಸೇವೆ ಪಡೆದುಕೊಳ್ಳಬಹುದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular