HomeLatest NewsBREAKING NEWS: ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕವಿದ್ದಂತೆ: ನೀರಜ್ ಚೋಪ್ರಾಗೆ ಕರೆ ಮಾಡಿ...

BREAKING NEWS: ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕವಿದ್ದಂತೆ: ನೀರಜ್ ಚೋಪ್ರಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ, ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 89.45 ಮೀಟರ್ ಜಾವಲಿನ್ ಎಸೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನದ ಆಟಗಾರ ಅರ್ಷದ್ ನದೀಮ್ 92.97 ಮೀಟರ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಬೆಳ್ಳಿ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಟ್ರ್ಯಾಕ್ ಹಾಗೂ ಪ್ಲೀಲ್ಡ್ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.

ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕರೆ ಮಾಡಿ, ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕದಂತೆ. ಗಾಯದ ನಡುವೆಯೂ ಉತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದಿದ್ದು, ಭಾರತಕ್ಕೆ ಹೆಮ್ಮೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದರ ಕುರಿತು ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ನೀರಜ್ ಚೋಪ್ರಾ ತಾವು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನು ನೀರಜ್ ಚೋಪ್ರಾ ಸಾಧನೆಗೆ ಸಾಮಾಜಿಕ ಜಾಲತಾಣಎಕ್ಸ್ ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನೀರಜ್ ಚೋಪ್ರಾ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಅವರು ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಚೋಪ್ರಾ ಮತ್ತೊಂದು ಒಲಿಂಪಿಕ್​ ಯಶಸಸ್ಸಿನೊಂದಿಗೆ ಮರಳುತ್ತಿರುವುದರ ಬಗ್ಗೆ ಭಾರತ ಹರ್ಷ ವ್ಯಕ್ತಪಡಿಸುತ್ತದೆ. ಬೆಳ್ಳಿಯನ್ನು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ನೀರಜ್​ ಚೋಪ್ರಾ ಅವರು, ನಮ್ಮ ದೇಶ ಹೆಮ್ಮೆ ಪಡುವಂತೆ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನಿಸುವ ಮುಂಬರುವ ಅಸಂಖ್ಯಾತ ಕ್ರೀಡಾಪಟುಗಳಿಗೆ ಪ್ರೇರೇಪಣೆಯಾಗುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular