HomeLatest NewsNEET ಹಗರಣ ಆಧರಿಸಿದ ದಿ ಆಕ್ಸಿಡೆಂಟಲ್ ಕಾಕ್ರೋಚ್ ಪಾರ್ಟಿ ಸಿನಿಮಾ

NEET ಹಗರಣ ಆಧರಿಸಿದ ದಿ ಆಕ್ಸಿಡೆಂಟಲ್ ಕಾಕ್ರೋಚ್ ಪಾರ್ಟಿ ಸಿನಿಮಾ

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದಿದ್ದ ಕಾಕ್ರೋಚ್ ಜನತಾ ಪಾರ್ಟಿ ಆಂದೋಲನ ಈಗ ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ. ಈ ವಿಶಿಷ್ಟ ಹೋರಾಟ ಮತ್ತು ರಾಜಕೀಯ ಹೈಡ್ರಾಮಾದ ಹಿನ್ನೆಲೆಯಲ್ಲಿ ಬೃಹತ್ ಸಿನಿಮಾವೊಂದನ್ನು ನಿರ್ಮಿಸಲು ಬಾಲಿವುಡ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಹೋರಾಟದ ಆಧಾರಿತ ಈ ನೂತನ ಚಿತ್ರಕ್ಕೆ ದಿ ಆಕ್ಸಿಡೆಂಟಲ್ ಕಾಕ್ರೋಚ್ ಪಾರ್ಟಿ ಎಂದು ಹೆಸರಿಡಲಾಗಿದ್ದು, ಶೀರ್ಷಿಕೆಯನ್ನು ಈಗಾಗಲೇ ಅಧಿಕೃತವಾಗಿ ನೋಂದಾಯಿಸಲಾಗಿದೆ.

₹20 ಕೋಟಿ ವೆಚ್ಚದಲ್ಲಿ ಸಿದ್ಧವಾಗಲಿದೆ ಬಿಗ್ ಬಜೆಟ್ ಸಿನಿಮಾ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈಪುರ ಮೂಲದ ಗೋವಿಂದ್ ದೇವ್ ಬ್ರಹ್ಮ ಅವರು ಸುದೀರ್ಘ ಸಂಶೋಧನೆ ನಡೆಸಿ ಚಿತ್ರಕಥೆ ಸಿದ್ಧಪಡಿಸಿದ್ದು, ಈ ಸಿನಿಮಾ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇದೊಂದು ಸಣ್ಣ ಮಟ್ಟದ ಸಾಕ್ಷ್ಯಚಿತ್ರದಂತಿರದೆ ಸುಮಾರು ₹20 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭಾರಿ ಬಜೆಟ್‌ನ ಕಮರ್ಷಿಯಲ್ ಫೀಚರ್ ಸಿನಿಮಾವಾಗಿದೆ.

ನೀಟ್ ಅಕ್ರಮದ ವಿರುದ್ಧ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ಪ್ರತಿಭಟನೆ ದೇಶದ ಶಿಕ್ಷಣ ವ್ಯವಸ್ಥೆ ಹಾಗೂ ರಾಜಕೀಯ ರಂಗದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿತ್ತು. ಈ ಸತತ ಹೋರಾಟದ ತೀವ್ರತೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು.

ಚಿತ್ರತಂಡದ ಪ್ರಕಾರ, ಈ ಸಿನಿಮಾ ಕೇವಲ ಮೇಲ್ನೋಟಕ್ಕೆ ಕಂಡ ರಾಜಕೀಯ ಕಥೆಯಾಗಿರುವುದಿಲ್ಲ. ಬದಲಿಗೆ, ಈ ಚಳುವಳಿಯ ಸ್ಕ್ರಿಪ್ಟ್ ಬರೆದದ್ದು ಯಾರು? ತೆರೆಮರೆಯಲ್ಲಿ ನಡೆದ ರಾಜಕೀಯ ತಂತ್ರಗಳು ಹಾಗೂ ಸಾರ್ವಜನಿಕರ ಕಣ್ಣಿಗೆ ಕಾಣಿಸದ ಹಲವು ಆಘಾತಕಾರಿ ಸತ್ಯಗಳನ್ನು ಈ ಚಿತ್ರದ ಮೂಲಕ ಹೊರತರಲಾಗುವುದು ಎಂದು ತಿಳಿಸಲಾಗಿದೆ.

ಪ್ರಸ್ತುತ ಜೈಪುರದಲ್ಲಿ ಚಿತ್ರಕಥೆಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಶೂಟಿಂಗ್ ಲೊಕೇಷನ್‌ಗಳ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಬಾಲಿವುಡ್‌ನ ಪ್ರಮುಖ ನಟರು, ನಿರ್ದೇಶಕರು ಹಾಗೂ ನಿರ್ಮಾಪಕರ ಆಯ್ಕೆಗಾಗಿ ಮುಂಬೈನಲ್ಲಿ ಮಾತುಕತೆಗಳು ಅಂತಿಮ ಹಂತ ತಲುಪಿವೆ. ಶೀಘ್ರದಲ್ಲೇ ತಾರಾಗಣ ಪ್ರಕಟವಾಗಲಿದ್ದು, ಎಲ್ಲವೂ ಯೋಜನೆಯಂತೆ ನಡೆದರೆ ಈ ಬಹುನಿರೀಕ್ಷಿತ ಸಿನಿಮಾ 2027ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular