ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರೆ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್ 21ರಿಂದ 25ರವರೆಗೆ ಅಭ್ಯರ್ಥಿಗಳು ಆಯ್ಕೆಗಳನ್ನು ಬದಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಆಗಸ್ಟ್ 29ರಂದು ಪ್ರಕಟವಾಗಲಿದೆ. ಆಯುರ್ವೇದ ಕೋರ್ಸ್ ಗಳ ಸೀಟು ಲಭ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಸುತ್ತಿನಲ್ಲಿ ಚಾಯ್ಸ್ -1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದವರನ್ನು ಹೊರತುಪಡಿಸಿ ಚಾಯ್ಸ್ -2 ಹಾಗೂ ಚಾಯ್ಸ್ -3 ಆಯ್ಕೆ ಮಾಡಿಕೊಂಡವರು ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಬಹುದು.
ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜಿಗೆ ಹೋಗಿ ಪ್ರವೇಶ ಪಡೆದುಕೊಳ್ಳಬೇಕು. ಅಂತವರಿಗೆ ಚಾಯ್ಸ್ -2 ಮತ್ತು ಚಾಯ್ಸ್ -3 ಗೆ ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
#UGCET/UGNEET-25: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 20, 2025
ಲಭ್ಯ ಸೀಟುಗಳ ವಿವರಗಳನ್ನು ಕೂಡ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಗುರುವಾರದಿಂದ (ಆ.21) ಇಚ್ಛೆ/ಆಯ್ಕೆಗಳನ್ನು ಬದಲಿಸುವ/ತೆಗೆಯುವ ಕೆಲಸವನ್ನೂ ಮಾಡಬಹುದು.…